Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಈ ಮಾತು ಪಕ್ಷಕ್ಕೆ ಡ್ಯಾಮೇಜ್ ಮಾಡಬಹುದು’—ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಆಕ್ಷೇಪ

ಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ; ರಾಹುಲ್ ಗಾಂಧಿಯಿಂದ ಮಹತ್ವದ ಸಲಹೆ!

2028ರ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲ, ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರಂತಹ ಅನುಭವಿ ನಾಯಕರು ಪಕ್ಷಕ್ಕೆ ಅಗತ್ಯವಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬಂತಹ ಹೇಳಿಕೆಗಳು ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇಂತಹ ಹೇಳಿಕೆಗಳನ್ನು ನೀಡದಿರುವುದು ಸೂಕ್ತ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ರಾಹುಲ್ ಮುಂದೆ ಸಿದ್ದರಾಮಯ್ಯ ಸ್ಪಷ್ಟನೆ

ಇದಕ್ಕೆ ಪ್ರತಿಕ್ರಿಯೆಯಾಗಿ ಸಿದ್ದರಾಮಯ್ಯ ಕೂಡ ತಮ್ಮ ಹೇಳಿಕೆಯ ಹಿಂದಿನ ಉದ್ದೇಶವನ್ನು ರಾಹುಲ್ ಗಾಂಧಿ ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ. ತಾವು ಸಂಪೂರ್ಣ ರಾಜಕೀಯದಿಂದ ಹಿಂದೆ ಸರಿಯುವ ಬಗ್ಗೆ ಮಾತನಾಡಿಲ್ಲ. ಬದಲಾಗಿ, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ನಿರ್ಧಾರದ ಬಗ್ಗೆ ಮಾತ್ರ ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಆದರೂ ಪಕ್ಷದ ಹಿರಿಯ ನಾಯಕರಾಗಿ ಇಂತಹ ಹೇಳಿಕೆಗಳು ಕಾರ್ಯಕರ್ತರು ಹಾಗೂ ಪಕ್ಷದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ, ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆ ವಹಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಘೋಷಣೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಈ ಮಾತು ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಅವರ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿ, ಸಿದ್ದರಾಮಯ್ಯ ಅವರು ಇನ್ನೂ ಹಲವು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದರು.

ನಂತರ ಸಾಮಾಜಿಕ ಜಾಲತಾಣದ ಮೂಲಕವೂ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು. ಚುನಾವಣಾ ರಾಜಕೀಯದಲ್ಲಿ ಹಿಂದೆ ಸರಿಯುವ ಆಲೋಚನೆ ಇದ್ದರೂ, ಸಕ್ರಿಯ ರಾಜಕಾರಣದಿಂದ ದೂರವಾಗುವುದಿಲ್ಲ. ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಮುಂದುವರಿಯುತ್ತೇನೆ ಎಂಬ ಸಂದೇಶವನ್ನು ಅವರು ನೀಡಿದ್ದರು.

ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ ಎಂದೂ ಸಿದ್ದರಾಮಯ್ಯ ಹೇಳಿದ್ದರು.

ಚುನಾವಣಾ ರಾಜಕೀಯದಲ್ಲಿ ಹಿಂದೆ ಸರಿಯುವ ಸಿದ್ದರಾಮಯ್ಯ ಅವರ ನಿರ್ಧಾರ ನಿಜಕ್ಕೂ ಅಂತಿಮವೇ? ಅಥವಾ ಮುಂದಿನ ದಿನಗಳಲ್ಲಿ ತಮ್ಮ ನಿರ್ಧಾರ ಬದಲಿಸಲಿದ್ದಾರೆಯೇ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version