Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಪರೀಕ್ಷೆಗೂ 15 ದಿನ ಮುನ್ನವೇ ಪ್ರಶ್ನೆಪತ್ರಿಕೆ ಲೀಕ್! ಕೆಪಿಎಸ್ಸಿ ಹಗರಣದಲ್ಲಿ ರೆಸಾರ್ಟ್‌ ‘ಡೀಲ್’ ಬಯಲು

ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರಿದಂತೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ.

ಸಿಐಡಿ ತನಿಖೆಯ ಪ್ರಕಾರ, ಪರೀಕ್ಷೆ ನಡೆಯುವುದಕ್ಕೂ ಸುಮಾರು 15 ದಿನಗಳ ಮುನ್ನವೇ ಪ್ರಶ್ನೆಪತ್ರಿಕೆ ಕೆಲವರ ಕೈ ಸೇರಿತ್ತು ಎನ್ನಲಾಗಿದೆ. ಆರೋಪಿಯಾಗಿರುವ ಬಸವರಾಜ್ ಕನ್ನಾಳೆ ಪ್ರಶ್ನೆಗಳನ್ನು ಪಡೆದುಕೊಂಡ ಬಳಿಕ, ಡೀಲ್ ಆಗಿದ್ದ ಅಭ್ಯರ್ಥಿಗಳನ್ನು ದೇವನಹಳ್ಳಿ ಬಳಿಯ ರೆಸಾರ್ಟ್‌ಗೆ ಕರೆದುಕೊಂಡು ಹೋಗಿ ಪ್ರಶ್ನೆಗಳಿಗೆ ಉತ್ತರಿಸುವ ರೀತಿಯ ಬಗ್ಗೆ ತರಬೇತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದಾದ ಬಳಿಕ ಕೆಲ ಅಭ್ಯರ್ಥಿಗಳು ಇದೇ ಪ್ರಶ್ನೆಗಳನ್ನು ಮತ್ತಷ್ಟು ಅಭ್ಯರ್ಥಿಗಳಿಗೆ 3ರಿಂದ 5 ಲಕ್ಷ ರೂಪಾಯಿವರೆಗೆ ಮಾರಾಟ ಮಾಡಿದ್ದರು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಪ್ರಶ್ನೆಪತ್ರಿಕೆಗಳ ಬಿಕರಿ ನಡೆದಿರುವ ಬಗ್ಗೆಯೂ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ.ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು 400ಕ್ಕೂ ಹೆಚ್ಚು ಆರೋಪಿಗಳು, ಅಭ್ಯರ್ಥಿಗಳು ಹಾಗೂ ಕೆಪಿಎಸ್ಸಿ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ.

ರೆಸಾರ್ಟ್‌ನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆಯಲಾಗಿದ್ದು, ಸೆಕ್ಯುರಿಟಿ ಗಾರ್ಡ್ ಮತ್ತು ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಕರೆತಂದಿದ್ದ ಕ್ಯಾಬ್ ಚಾಲಕರ ಹೇಳಿಕೆಯನ್ನೂ ದಾಖಲಿಸಲಾಗಿದೆ.ಇನ್ನೊಂದೆಡೆ, ಬಸವರಾಜ್ ಕನ್ನಾಳೆ ಅವರ ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪತ್ನಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಐಟಿ ರಿಟರ್ನ್ಸ್ ಸಲ್ಲಿಸಿರುವ ಬಗ್ಗೆ ಪ್ರಶ್ನಿಸಿದಾಗ, ಹಾಲಿನ ವ್ಯಾಪಾರ ಹಾಗೂ ಟ್ರಾವೆಲ್ ಉದ್ಯಮದಿಂದ ಆದಾಯ ಬಂದಿದೆ ಎಂದು ಹೇಳಿದ್ದಾನೆ ಎನ್ನಲಾಗಿದೆ.ಪ್ರಕರಣದ ಪ್ರಮುಖ ಸಾಕ್ಷ್ಯಗಳು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಮೊಬೈಲ್ ಮತ್ತು ಪೆನ್‌ಡ್ರೈವ್‌ಗಳನ್ನು ಕಾವೇರಿ ನದಿ ಬಳಿ ಎಸೆದಿರುವುದಾಗಿ ಕನ್ನಾಳೆ ಹೇಳಿದ್ದರೂ, ಅವು ನಾಶವಾದ ಬಗ್ಗೆ ಸ್ಪಷ್ಟ ಸಾಕ್ಷ್ಯ ಸಿಕ್ಕಿಲ್ಲ ಎನ್ನಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆಯಾದದ್ದು ಹೇಗೆ? ಹಣದ ಡೀಲ್‌ನಲ್ಲಿ ಇನ್ನೆಷ್ಟು ಮಂದಿ ಇದ್ದಾರೆ? ಎಂಬ ಪ್ರಶ್ನೆಗಳಿಗೆ ಸಿಐಡಿ ತನಿಖೆಯಿಂದ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಿದೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version