Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಶ್ರೀಲಂಕಾಗೆ ಶಾಕ್ ಕೊಟ್ಟು ಏಷ್ಯಾ ಕಪ್ ಎತ್ತಿದ ಭಾರತ; 8ನೇ ಬಾರಿ ಚಾಂಪಿಯನ್‌! ಮೋದಿ ಅಭಿನಂದನೆ

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಏಷ್ಯಾದಲ್ಲಿ ತನ್ನ ಸಾಮ್ರಾಜ್ಯ ಮುಂದುವರಿಸಿದೆ!

2026ರ ಮಹಿಳಾ ಏಷ್ಯಾ ಕಪ್ ಫೈನಲ್‌ನಲ್ಲಿ ಶ್ರೀಲಂಕಾವನ್ನು 72 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಟ್ರೋಫಿ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 183 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಭಾರತದ ಪರ ಆರಂಭಿಕರಾದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನಾ ಅಬ್ಬರಿಸಿದರು.

ಇಬ್ಬರೂ ಮೊದಲ ವಿಕೆಟ್‌ಗೆ ಬರೋಬ್ಬರಿ 129 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು.

ಶಫಾಲಿ ಕೇವಲ 39 ಎಸೆತಗಳಲ್ಲಿ 68 ರನ್ ಸಿಡಿಸಿದರೆ, ಸ್ಮೃತಿ ಮಂಧಾನಾ 59 ರನ್‌ಗಳ ಕೊಡುಗೆ ನೀಡಿದರು.

184 ರನ್‌ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ ಕೇವಲ 111 ರನ್‌ಗಳಿಗೆ ಆಲೌಟ್ ಆಯಿತು.

ಶ್ರೀ ಚರಣಿ 4 ವಿಕೆಟ್, ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಇನ್ನು 2024ರ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಅನುಭವಿಸಿದ್ದ ಸೋಲಿಗೂ ಭಾರತ ಭರ್ಜರಿ ತಿರುಗೇಟು ನೀಡಿದೆ.

ಈ ಐತಿಹಾಸಿಕ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ತಂಡದ ಆತ್ಮವಿಶ್ವಾಸ, ಸ್ಥಿರತೆ ಮತ್ತು ಹೋರಾಟದ ಮನೋಭಾವವನ್ನು ಶ್ಲಾಘಿಸಿದ್ದಾರೆ.

ಏಷ್ಯಾ ಕಪ್‌ನಲ್ಲಿ ಮತ್ತೊಮ್ಮೆ ಭಾರತದ ಮಹಿಳಾ ಶಕ್ತಿ ಅಬ್ಬರಿಸಿದೆ

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version