Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಸಕಲೇಶಪುರದಲ್ಲಿ ಬೆಂಗಳೂರಿನ ಯುವತಿ ಅನುಮಾನಾಸ್ಪದ ಸಾ*ವು; ಲಾಡ್ಜ್‌ನಲ್ಲಿ ನಡೆದಿದ್ದೇನು?

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಲಾಡ್ಜ್‌ವೊಂದರಲ್ಲಿ ಬೆಂಗಳೂರಿನ 23 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃ*ತಪಟ್ಟಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃ*ತ ಯುವತಿಯನ್ನು ಬೆಂಗಳೂರಿನ ನಿವಾಸಿ ವರ್ಷಾ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ವರ್ಷಾ ಸೆಪ್ಟೆಂಬರ್ 11ರಂದು ತನ್ನ ಇಬ್ಬರು ಸ್ನೇಹಿತರಾದ ರಘು ಹಾಗೂ ದರ್ಶನ್ ಜೊತೆ ಸಕಲೇಶಪುರಕ್ಕೆ ಬಂದಿದ್ದರು. ಹೆಟ್ಟೂರು ಹೋಬಳಿಯ ವಲಲಹಳ್ಳಿ ಕುಡಿಗೆ ಗ್ರಾಮದ ಶ್ರೀದೇವಿ ಲಾಡ್ಜ್‌ನಲ್ಲಿ ಅವರು ತಂಗಿದ್ದರು.ಸೆಪ್ಟೆಂಬರ್ 15ರಂದು ವರ್ಷಾ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೆಟ್ಟೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅವರು ಮೃ*ತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ IPS ಅವರ ಪ್ರಕಾರ, ಸಂಜೆ ಸುಮಾರು 7.20ರ ವೇಳೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಯುವತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃ*ತಪಟ್ಟಿರುವ ಬಗ್ಗೆ ಮಾಹಿತಿ ಬಂದಿತ್ತು.ವಿಷಯ ತಿಳಿದು ಪೊಲೀಸರು ವರ್ಷಾ ಅವರ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಬೆಂಗಳೂರಿನಿಂದ ಸಕಲೇಶಪುರಕ್ಕೆ ಆಗಮಿಸಿ ಅಸಹಜ ಸಾ*ವಿನ ವರದಿ (UDR) ದಾಖಲಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 194(3) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ವರ್ಷಾ ಅವರ ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ HIMSಗೆ ರವಾನಿಸಲಾಗಿದೆ.

https://saloon.hublihost.com/wp-content/uploads/2026/09/1000061401.mp4

ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಸಾ*ವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.DySP ಮಲತೀಶ್ ಹಾಗೂ ಸಕಲೇಶಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

ಆರಂಭಿಕ ಪರಿಶೀಲನೆಯಲ್ಲಿ ವರ್ಷಾ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.ವರ್ಷಾ ಸಕಲೇಶಪುರಕ್ಕೆ ತೆರಳಿರುವ ವಿಚಾರ ಅವರ ಪೋಷಕರಿಗೆ ತಿಳಿದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಪುರುಷ ಸ್ನೇಹಿತರೊಂದಿಗೆ ಲಾಡ್ಜ್‌ಗೆ ಬಂದಿದ್ದ ಸಂದರ್ಭ ಸೇರಿದಂತೆ ಸಾ*ವಿಗೆ ಕಾರಣವಾದ ನಿಖರ ಪರಿಸ್ಥಿತಿಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version