Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

77 ವರ್ಷದ ನಂತರ ಸೂರ್ಯನಿಂದ ‘ಬೆಂದ’ಕಾಳೂರು: ಸೆಪ್ಟೆಂಬರ್‌ನಲ್ಲೂ ಸುಡುತ್ತಿದೆ ಬಿಸಿಲ ತಾಪ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳೆಂದರೆ ತಣ್ಣನೆಯ ಹವಾಮಾನ, ಸಾಧಾರಣ ಮಳೆಯ ವಾತಾವರಣವಿರುತ್ತದೆ. ಆದರೆ ಈ ಬಾರಿ ಬೆಂಗಳೂರಿಗರು ತೀವ್ರ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದಾರೆ. ಬರೋಬ್ಬರಿ 77 ವರ್ಷಗಳ ಬಳಿಕ ಸೆಪ್ಟೆಂಬರ್ ತಿಂಗಳಲ್ಲಿ ದಾಖಲೆಯ ತಾಪಮಾನ ದಾಖಲಾಗಿದ್ದು, ‘ಬೆಂದಕಾಳೂರು’ ಸ್ಥಿತಿ ಎದುರಾಗಿದೆ.

ಕಳೆದ ಕೆಲವು ವರ್ಷಗಳ ದತ್ತಾಂಶಕ್ಕೆ ಹೋಲಿಸಿದರೆ, ಈ ವರ್ಷ ಸೆಪ್ಟೆಂಬರ್ ತಿಂಗಳ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ.

ಕಳೆದ ಕೆಲವು ವರ್ಷಗಳ ಸೆಪ್ಟೆಂಬರ್ ತಿಂಗಳ ತಾಪಮಾನ (ಡಿಗ್ರಿ ಸೆಲ್ಸಿಯಸ್‌ನಲ್ಲಿ):

ವರ್ಷತಾಪಮಾನ (°C)
202033.06
202131.03
202231.00
202330.08
202431.06
202529.09
202633.02

ಪ್ರಸಕ್ತ 2026ರ ಸೆಪ್ಟೆಂಬರ್‌ನಲ್ಲಿ ತಾಪಮಾನ 33.02°C ದಾಟಿದ್ದು, 2020ರ ನಂತರ ದಾಖಲಾದ ಅತ್ಯಂತ ಗರಿಷ್ಠ ತಾಪಮಾನ ಇದಾಗಿದೆ. 2025ರಲ್ಲಿ 29.09°C ಇದ್ದ ತಾಪಮಾನ, ಕೇವಲ ಒಂದೇ ವರ್ಷದಲ್ಲಿ ಏಕಾಏಕಿ ಏರಿಕೆಯಾಗಿರುವುದು ಸಾರ್ವಜನಿಕರ ಹಾಗೂ ಹವಾಮಾನ ತಜ್ಞರ ಆತಂಕಕ್ಕೆ ಕಾರಣವಾಗಿದೆ.

ಮಳೆಯಾಗಬೇಕಿದ್ದ ದಿನಗಳಲ್ಲಿ ಮೋಡಕವಿದ ವಾತಾವರಣವಿದ್ದರೂ ಬಿಸಿಲಿನ ಪ್ರಮಾಣ ಮತ್ತು ಕಾವು ಹೆಚ್ಚಾಗಿರುವುದು ನಗರವಾಸಿಗಳನ್ನು ಹೈರಾಣಾಗಿಸಿದೆ. ಹವಾಮಾನ ಬದಲಾವಣೆ ಮತ್ತು ನಗರೀಕರಣದ ಪ್ರಭಾವದಿಂದಾಗಿ ಈ ರೀತಿಯ ತೀವ್ರ ಹವಾಮಾನ ಏರಿಳಿತ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version