Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಹಿಂದಿನ ಸರ್ಕಾರದ ಕಾಮಗಾರಿಗಳ ಹೊರೆ! “ಬಿಲ್‌ ಕೊಡೋ ಹೊಣೆ ನಮ್ಮದು

ಚಾಮರಾಜನಗರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಅಗತ್ಯ ಅನುದಾನ ಮೀಸಲಿಡದೇ ಕೆಲಸ ಆರಂಭಿಸಿದ್ದರಿಂದ, ಅವುಗಳ ಹಣಕಾಸಿನ ಪರಿಣಾಮ ಈಗಿನ ಸರ್ಕಾರದ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹನೂರಿನಲ್ಲಿ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲಿ ಆರಂಭವಾಗಿದ್ದ ಕೆಲವು ಕಾಮಗಾರಿಗಳು ಇದೀಗ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳಿಗೆ ಬಿಲ್ ಪಾವತಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು. ರಾಜ್ಯದ ಗುತ್ತಿಗೆದಾರರು ₹30 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಬಿಲ್‌ಗಳು ಬಾಕಿ ಉಳಿದಿವೆ ಎಂದು ಹೇಳಿರುವುದು ಸರ್ಕಾರದ ಗಮನದಲ್ಲಿದೆ ಎಂದು ತಿಳಿಸಿದರು.

ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕದಂತೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚಿಸುವುದಾಗಿ ಡಿಕೆ ಶಿವಕುಮಾರ್ ಹೇಳಿದರು. ಇದೇ ವೇಳೆ ಗುತ್ತಿಗೆದಾರರಿಂದ ಕಮಿಷನ್ ಕೇಳಲಾಗುತ್ತಿದೆ ಎಂಬ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಸಂಘದ ಅಧ್ಯಕ್ಷರು ಪ್ರಮಾಣಪತ್ರ ಸಲ್ಲಿಸಿದರೆ ಈ ಕುರಿತು ತನಿಖೆ ನಡೆಸುವುದಾಗಿ ತಿಳಿಸಿದರು.

ಹನೂರಿನ ₹490 ಕೋಟಿ ನೀರಾವರಿ ಯೋಜನೆ ಕುರಿತು ಮಾತನಾಡಿದ ಅವರು, ಕಾಮಗಾರಿ ಆರಂಭಕ್ಕೂ ಮುನ್ನ ಸಚಿವ ಸಂಪುಟ, ಸಂಬಂಧಿತ ಸಮಿತಿಗಳು ಹಾಗೂ ಮಂಡಳಿಗಳ ಅನುಮೋದನೆ ಪಡೆಯಬೇಕಿದೆ. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದರು.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ, ಎಸ್‌ಐಆರ್ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದರು.

ಹೊರರಾಜ್ಯದವರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹೊಸ ಅರ್ಜಿ ನಮೂನೆ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version