Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ಬಿಗ್‌ಬಾಸ್ ಬಳಿಕ ರಾಜಕೀಯದಲ್ಲಿ ಜಾಹ್ನವಿಗೆ ಬಿಗ್ ಜವಾಬ್ದಾರಿ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬಿಗ್‌ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರ ರಾಜಕೀಯ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಜೆಡಿಎಸ್‌ನಲ್ಲಿ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಜಾಹ್ನವಿಗೆ ಈ ಹುದ್ದೆ ನೀಡಲಾಗಿದೆ. ಪಕ್ಷಕ್ಕೆ ಸೇರ್ಪಡೆಯಾದ ಕೆಲವೇ ಅವಧಿಯಲ್ಲಿ ಸಂಘಟನೆಯ ಪ್ರಮುಖ ಹುದ್ದೆ ದೊರೆತಿರುವುದು ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಜಾಹ್ನವಿ 2024ರ ಮೇನಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದರು. ಬಳಿಕ ಪಕ್ಷದ ಚಟುವಟಿಕೆಗಳು ಹಾಗೂ ವಿವಿಧ ಸಾರ್ವಜನಿಕ ವಿಚಾರಗಳಲ್ಲಿ ಕಾಣಿಸಿಕೊಳ್ಳುತ್ತಾ ಬಂದಿರುವ ಅವರು, ಇದೀಗ ಅಧಿಕೃತವಾಗಿ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.

ರಾಜಕೀಯ ಪ್ರವೇಶಕ್ಕೂ ಮುನ್ನ ಜಾಹ್ನವಿ ಟಿವಿ ಆಂಕರ್ ಆಗಿ ಗುರುತಿಸಿಕೊಂಡಿದ್ದರು. ವಿವಿಧ ಕಾರ್ಯಕ್ರಮಗಳು ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದ ಅವರು, ಬಿಗ್‌ಬಾಸ್ ಕನ್ನಡದ ಮೂಲಕವೂ ಜನಪ್ರಿಯರಾಗಿದ್ದರು. ನಂತರ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಜೆಡಿಎಸ್‌ನೊಂದಿಗೆ ತಮ್ಮ ಹೊಸ ಪಯಣ ಆರಂಭಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಬಿಡದಿ ಭಾಗದ ವಿವಿಧ ವಿಚಾರಗಳು ಸೇರಿದಂತೆ ಸ್ಥಳೀಯ ಸಮಸ್ಯೆಗಳ ಕುರಿತು ಜಾಹ್ನವಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಬಿಡದಿ ಪಾದಯಾತ್ರೆಯಂತಹ ಕಾರ್ಯಕ್ರಮಗಳಲ್ಲೂ ಅವರು ಭಾಗವಹಿಸಿದ್ದರು.ಇದೀಗ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಕ್ಕಿರುವುದರಿಂದ ಪಕ್ಷದ ಸಂಘಟನೆ, ಯುವ ಸಮುದಾಯದ ಸಂಪರ್ಕ ಹಾಗೂ ಮುಂದಿನ ರಾಜಕೀಯ ಚಟುವಟಿಕೆಗಳಲ್ಲಿ ಜಾಹ್ನವಿ ಅವರ ಪಾತ್ರ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹೊಸ ಜವಾಬ್ದಾರಿ ಕುರಿತು ಪ್ರತಿಕ್ರಿಯಿಸಿರುವ ಜಾಹ್ನವಿ, ಪಕ್ಷ ಸಂಘಟನೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ತಮ್ಮ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *