Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

ರಸ್ತೆ ಅಪಘಾ*ತದಲ್ಲಿ ಬ್ರೈನ್ ಡೆಡ್ ಆದ ಟೆಕ್ಕಿ; ಮಗನ ಅಗಲಿಕೆಯ ನೋವಿನಲ್ಲೂ ಅಂಗಾಂಗ ದಾನ ಮಾಡಿದ ಹೆತ್ತವರು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯುವ ಸಾಫ್ಟ್‌ವೇರ್ ಇಂಜಿನಿಯರ್‌ ಒಬ್ಬರ ದುರಂತ ಅಂತ್ಯ ಕುಟುಂಬಕ್ಕೆ ಆಘಾತ ತಂದಿದೆ.

ಆದರೆ ಮಗನನ್ನು ಕಳೆದುಕೊಂಡ ದುಃಖದ ನಡುವೆಯೇ ಪೋಷಕರು ತೆಗೆದುಕೊಂಡ ನಿರ್ಧಾರ ಹಲವು ಜೀವಗಳಿಗೆ ಹೊಸ ಭರವಸೆ ನೀಡಿದೆ.

ಚಾಕೇನಹಳ್ಳಿಕಟ್ಟೆ ಗ್ರಾಮದ ಚಂದ್ರೇಗೌಡ ಹಾಗೂ ಶಿವಮ್ಮ ದಂಪತಿಯ ಏಕೈಕ ಪುತ್ರ ರವಿಕುಮಾರ್ (31) ಅಪಘಾ*ತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

ಬೆಂಗಳೂರಿನ ವಿಪ್ರೋ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಅವರು ರಜೆಗಾಗಿ ಊರಿಗೆ ಬಂದಿದ್ದ ಸಂದರ್ಭದಲ್ಲಿ ಜುಲೈ 6ರಂದು ಪರಸನಹಳ್ಳಿ ಬಳಿ ರಸ್ತೆ ಅಪಘಾ*ತ ಸಂಭವಿಸಿತ್ತು.

ಅಪಘಾ*ತದಲ್ಲಿ ತಲೆಗೆ ಗಂಭೀರ ಗಾಯವಾಗಿದ್ದ ಹಿನ್ನೆಲೆಯಲ್ಲಿ ರವಿಕುಮಾರ್ ಅವರನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಸುದೀರ್ಘ ಅವಧಿಯ ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ನಿರೀಕ್ಷಿತ ಚೇತರಿಕೆ ಕಂಡುಬರಲಿಲ್ಲ.

ವೈದ್ಯರು ರವಿಕುಮಾರ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ದೃಢಪಡಿಸಿದ ಬಳಿಕ ಕುಟುಂಬದ ಮುಂದೆ ಅತ್ಯಂತ ಕಠಿಣ ಪರಿಸ್ಥಿತಿ ಎದುರಾಯಿತು. ಏಕೈಕ ಮಗನನ್ನು ಕಳೆದುಕೊಂಡ ನೋವಿನಲ್ಲಿದ್ದರೂ, ಅವರ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುವ ಮೂಲಕ ಮಹತ್ವದ ಮಾನವೀಯ ನಿರ್ಧಾರ ಕೈಗೊಂಡಿದ್ದಾರೆ.

‘ಜೀವಸಾರ್ಥಕತೆ’

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *

Exit mobile version