Skip to content
ಫ್ಲ್ಯಾಶ್ ನ್ಯೂಸ್
ಜನವರಿಯಲ್ಲಾದರೂ ಜನರ ಸರದಿ ಬಂದೀತೇ? ಪಾಸ್ ಇದ್ದವರಿಗೆ ಸೌಧ, ಕಬ್ಬು ಬೆಳೆದವನಿಗೆ ಹೆದ್ದಾರಿ ನಾರ್ತ್ ಬ್ಲಾಕ್ ಮೇಲೆ ಕಪ್ಪು ಹೊಗೆ… ರೈಸಿನಾ ಹಿಲ್‌ನಲ್ಲಿ ಕೆಲಕಾಲ ಆತಂಕದ ಉಸಿರು ರಾವಣನಿಗೆ ಎಲ್ಲವೂ ಇತ್ತು, ಆದರೂ ಸೋತಿದ್ದೇಕೆ? ರಾಮಾಯಣ ಕಲಿಸುವ ಬದುಕಿನ 7 ಅಮೂಲ್ಯ ಪಾಠಗಳು ಗಾಂಧೀಜಿಯವರ ‘5ನೇ ಮಗ’ ಜಮ್ನಾಲಾಲ್ ಬಜಾಜ್ ಕಟ್ಟಿದ ಉದ್ಯಮ ಸಾಮ್ರಾಜ್ಯ ಎಷ್ಟು ದೊಡ್ಡದು ಗೊತ್ತಾ? ಬಾಲಿವುಡ್‌ಗೆ ಗ್ಯಾಂಗ್‌ಸ್ಟರ್‌ಗಳ ಕಾಟ! ಟೈಗರ್ ಶ್ರಾಫ್‌ನಿಂದ ಸಲ್ಮಾನ್ ಖಾನ್‌ವರೆಗೆ ಬೆದರಿಕೆಯ ಸುಳಿಯಲ್ಲಿ ಸೆಲೆಬ್ರಿಟಿಗಳು ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂಗ್ ಷಡ್ಯಂತ್ರ? ಕೃಪಾ ಆಳ್ವಾ ಹೆಸರು ಪ್ರಸ್ತಾಪಿಸಿ ಎಚ್‌.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ! ರೇಣುಕಾಸ್ವಾಮಿ ಕೇಸ್‌ಗೆ ಹೊಸ ತಿರುವು? ‘ಆ ವಿಷಯ ಗೊತ್ತೇ ಇಲ್ಲ’ ಎಂದ ಯಶಸ್ ಸೂರ್ಯ; ಸಾಕ್ಷಿ ಹೇಳಿಕೆಗೆ ಎಸ್‌ಪಿಪಿ ಆಕ್ಷೇಪ! ಸುದೀಪ್ ತಾಯಿ ಹೆಸರಲ್ಲಿ ಕ್ರಿಕೆಟ್ ಟೂರ್ನಿ ನೆಪದಲ್ಲಿ ದೋಖಾ ಆರೋಪ! 27 ತಂಡಗಳಿಂದ ಹಣ ಸಂಗ್ರಹಿಸಿ ಪರಾರಿ? ತಿರುಮಲದಲ್ಲಿ ಇನ್ಮುಂದೆ ದಾರಿ ತಪ್ಪುವ ಭಯವಿಲ್ಲ! ಕನ್ನಡದಲ್ಲೂ ‘ವೆಂಕಟಾದ್ರಿ’ ಆ್ಯಪ್ ಲಭ್ಯ
Wednesday, 4 November 2026

‘ಸ್ಟಿಂಗ್’ ರಾಜಕೀಯದ ಹೊಸ ಚರ್ಚೆ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ‘ಸ್ಟಿಂಗ್ ಆಪರೇಷನ್’ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಮೇಲೆ ರಹಸ್ಯ ನಿಗಾ ಇರಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ದೂರ ಮಾಡಲು ಡಿಕೆ ಶಿವಕುಮಾರ್ ಈ ಹಿಂದೆ ಸ್ಟಿಂಗ್ ಆಪರೇಷನ್ ತಂತ್ರ ಬಳಸಿದ್ದರು ಎಂದು ಕೆಲ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಈಗ ತಮ್ಮದೇ ಸರ್ಕಾರದ ಸಚಿವರನ್ನು ನಿಯಂತ್ರಿಸಲು ಇದೇ ರೀತಿಯ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು. ಸಚಿವರ ಚಲನವಲನಗಳ ಮೇಲೆ ಖಾಸಗಿ ಏಜೆನ್ಸಿಗಳ ಮೂಲಕ ನಿಗಾ ಇರಿಸಲಾಗುತ್ತಿದೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲೂ ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಹೊರಬಂದಿರುವ ಹಿನ್ನೆಲೆಯಲ್ಲಿ ‘ಸ್ಟಿಂಗ್ ಆಪರೇಷನ್’ ಆರೋಪ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಆರೋಪಗಳ ಕುರಿತು ಸರ್ಕಾರದ ಅಧಿಕೃತ ಸ್ಪಷ್ಟನೆ ಏನು ಎಂಬುದು ಇದೀಗ ಕುತೂಹಲ ಮೂಡಿಸಿದೆ.

praveen

ಸಂಬಂಧಿತ ಸುದ್ದಿಗಳು

Leave a Reply

Your email address will not be published. Required fields are marked *